ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಮಹಿಳೆಯರ ಸಬಲೀಕರಣ ಸಾಧ್ಯ: ರಿಯಾಝ್ ಫರಂಗಿಪೇಟೆ

Prasthutha|

ಉಳ್ಳಾಲ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಿಯಾಝ್ ಫರಂಗಿಪೇಟೆಯವರು SDPI ಪುದು ಗ್ರಾಮ ಸಮಿತಿ ವತಿಯಿಂದ ನಡೆದ ಮಹಿಳಾ ಕಾರ್ಯಕರ್ತೆಯರ ಸಮ್ಮಿಲನದಲ್ಲಿ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

- Advertisement -


ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯದೊಂದಿಗೆ ಗೌರವಯುತ ಜೀವನ ನಡೆಸಬೇಕಾದರೆ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಬಹು ಮುಖ್ಯ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
SDPI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸಂವಿಧಾನದ 4 ಅಂಗಗಳಲ್ಲಿ ಬಹುಮುಖ್ಯ ಪ್ರಾಶಸ್ತ್ಯವನ್ನು ಹೊಂದಿರುವ ಶಾಸಕಾಂಗದಲ್ಲಿ ಪ್ರತಿನಿಧಿಸುವ ವಿಷಯದಲ್ಲಿ ಮಹಿಳೆಯರ ನಿರ್ಣಯವು ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ರಾಜಕೀಯ ವಿಚಾರದಲ್ಲಿ ಮಹಿಳೆಯರು ತಮ್ಮ ಪ್ರಾಶಸ್ತ್ಯವನ್ನು ಪಡೆದು ಶಾಸನಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಬೇಕು ಎಂಬ ದೃಷ್ಟಿಯಲ್ಲಿ ಆಲೋಚನೆ ಮಾಡಬೇಕಾಗಿದೆ ಎಂದು ಹೇಳಿದರು.


ಈ ಸಂಧರ್ಭದಲ್ಲಿ ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾದ ಮಹಿಳೆಯರಿಗೆ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು
ಈ ಕಾರ್ಯಕ್ರಮದಲ್ಲಿ ಪುದು ಗ್ರಾಮ ಪಂಚಾಯತ್ ಸದಸ್ಯೆ ಯಾದ ರುಕ್ಷನಾ ಸಲಾಂ, ಕೈರುನ್ನೀಶಾ ಇಸಾಕ್, ಮತ್ತು ಪುದು ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು



Join Whatsapp