WIM ವತಿಯಿಂದ 77 ನೇ ಸ್ವಾತಂತ್ರ್ಯೋವದ ಪ್ರಯುಕ್ತ ವಿಮೆನ್ಸ್ ಗಾಟ್ ಟ್ಯಾಲೆಂಟ್ ಕಾರ್ಯಕ್ರಮ

Prasthutha|

ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ‘ವಿಮೆನ್ಸ್ ಗೋಟ್ ಟ್ಯಾಲೆಂಟ್ -2’
ಬೆಂಕಿ ಬಳಸದೆ ಅಡುಗೆ ಮಾಡುವ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ ಆ.15ರಂದು ಮಂಗಳವಾರ ಸುರತ್ಕಲ್ ಚೊಕ್ಕಬೆಟ್ಟುವಿನ ಎಂ. ಜೆ. ಎಂ. ಸಭಾಭವನದಲ್ಲಿ ಮಧ್ಯಾಹ್ನ 1:30 ಕ್ಕೆ ನಡೆಯಲಿದೆ.

- Advertisement -

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರನ್ನು ನೋಂದಾಯಿಸಬೇಕು. ವಿಜೇತ ಸ್ಪರ್ಧಿಗಳಿಗೆ ಬಹುಮಾನ ನೀಡಿ ಗೌರವಿಸಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕಾರ್ಯಕ್ರಮದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Join Whatsapp