ಉಡುಪಿ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಉಡುಪಿ ಜಿಲ್ಲೆಯ ಕಾಪು ತಾಲೂಕು ಸಮಿತಿಯು ದಿನಾಂಕ ಫೆ. 20ರಂದು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷೆಯಾಗಿ ಫರ್ಝಾನ ಉಚ್ಚಿಲ, ಉಪಾಧ್ಯಕ್ಷೆಯಾಗಿ ಸುರಯ್ಯ ಫರ್ವೀನ್, ಕಾರ್ಯದರ್ಶಿಯಾಗಿ ನೌಶೀನ್, ಜೊತೆ ಕಾರ್ಯದರ್ಶಿಯಾಗಿ ಸೌಲತ್, ಕೋಶಾಧಿಕಾರಿಯಾಗಿ ಸಂಶಾದ್ ಹಾಗೂ ತಾಲೂಕು ಸಮಿತಿ ಸದಸ್ಯರಾದ ಇಶ್ರತ್, ನಾಝಿರಾ, ವಹೀದಾ, ಫೌಝಿಯಾ ಅವರು ಆಯ್ಕೆಯಾಗಿದ್ದಾರೆ.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜಿಲ್ಲಾಧ್ಯಕ್ಷೆ ನಾಝಿಯಾ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು