Home ಟಾಪ್ ಸುದ್ದಿಗಳು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಫಾರೂಕ್ ಅಬ್ದುಲ್ಲಾ

ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಫಾರೂಕ್ ಅಬ್ದುಲ್ಲಾ

ಶ್ರೀನಗರ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿರುವ ಬೆನ್ನಲ್ಲೇ ಸ್ಪರ್ಧಿಸುವ ಪ್ರಸ್ತಾಪವನ್ನು ಫಾರೂಕ್ ತಿರಸ್ಕರಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನಿರಾಕರಿಸಿರುವ ಫಾರೂಕ್ ಅಬ್ದುಲ್ಲಾ, ನಾನಿನ್ನೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಸಭೆ ಸೇರಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆಸಿದ್ದರು . ಸಭೆಯಲ್ಲಿ ಎನ್’ಸಿಪಿ ಮುಖ್ಯಸ್ಥ ಶರದ್ ಪವಾರ್ ಹೆಸರು ಕೇಳಿಬಂದಿತ್ತು , ಆದರೆ ಅಚ್ಚರಿಯೆಂಬಂತೆ ಶರದ್ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪನೆಯನ್ನು ತಿರಸ್ಕರಿಸಿದ್ದರು.

Join Whatsapp
Exit mobile version