ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಮಾಜವಾದಿ ನಾಯಕ ಅಖಿಲೇಶ್ ಯಾದವ್

Prasthutha|

ಲಕ್ನೋ: ಉತ್ತರ ಪ್ರದೇಶ ಅಸೆಂಬ್ಲಿಗೆ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ತಿಳಿಸಿದ್ದಾರೆ.

- Advertisement -

ಈ ನಡುವೆ ಎಸ್ಪಿ ಮತ್ತು ರಾಷ್ಟ್ರೀಯ ಲೋಕದಳ (ಆರ್.ಎಲ್.ಡಿ) ನಡುವೆ ಚುನಾವಣೋತ್ತರ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ತಿಳಿಸಿದರು. ಮಾತ್ರವಲ್ಲ ಸೀಟು ಹಂಚಿಕೆ ಕುರಿತು ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.

ಆಝಂಘಡದ ಸಂಸದ, ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಅಖಿಲೇಶ್ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಿಲ್ಲ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.



Join Whatsapp