ಉ.ಪ್ರದೇಶ ಗೃಹ ಸಚಿವರನ್ನು ಸಂಪುಟದಿಂದ ವಜಾ ಮಾಡಿ, ಪುತ್ರನನ್ನು ಬಂಧಿಸಿ: ರೈತ ಮುಖಂಡ ರಾಕೇಶ್ ಟಿಕಾಯತ್ ಒತ್ತಾಯ

Prasthutha|

ಲಕ್ನೋ: ಸೋಮವಾರ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರನ್ನು ಕಾರು ಹರಿಸಿ ಹತ್ಯೆ ಮಾಡಿದ ಘಟನೆಗೆ ಸಂಬಂಸಿದಂತೆ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಆತನ ಪುತ್ರನನ್ನು ಬಂಧಿಸಬೇಕೆಂದು ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಆದಿತ್ಯನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಮಾತ್ರವಲ್ಲ ಮೃತಪಟ್ಟ ರೈತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು. ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದರೆ ಮೃತಪಟ್ಟ ರೈತನ ಅಂತ್ಯಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಭಾನುವಾರ ಉತ್ತರಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಎಂಟು ಮಂದಿ ಬಲಿಯಾಗಿದ್ದರು.

ಹಿಂಸಾಚಾರ ಪೀಡಿತ ಉತ್ತರ ಪ್ರದೇಶದ ಲಖಿಂಪುರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸೆಕ್ಷನ್ 144 ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಪ್ರಸಕ್ತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಾತ್ರವಲ್ಲದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾವದ್ ಸೇರಿದಂತೆ ರಾಜಕೀಯ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.



Join Whatsapp