ತುಮಕೂರು: ಇತ್ತೀಚೆಗೆ ರಾಜ್ಯ ಸರಕಾರವು ಐದು ಮತ್ತು ಎಂಟನೇ ತರಗತಿ ಮಕ್ಕಳ ಪರೀಕ್ಷೆ ಮೌಲ್ಯಮಾಪನ ಕುರಿತಂತೆ ಹೊರಡಿಸಿರುವ ಸುತ್ತೋಲೆಯು ಗೊಂದಲಕಾರಿಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅದು ಪಬ್ಲಿಕ್ ಪರೀಕ್ಷೆಯಲ್ಲ, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವುದಿಲ್ಲ. ಆತನ ಕಲಿಕೆಯನ್ನು ಮೌಲ್ಯ ಮಾಪನ ಮಾಡುವುದಷ್ಟೇ ಕೆಲಸವನ್ನು ಮಾಡಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮಗುವಿನ ತಿಳಿವಳಿಕೆಯನ್ನು ಮೌಲ್ಯಮಾಪನ ಮಾಡಲಾಗುತ್ತಿದೆ. ಇದರಿಂದ ಮುಂದಿನ ತರಗತಿಯಲ್ಲಿ ಆತ ತನ್ನ ಪಕ್ಕದಲ್ಲಿ ಕುಳಿತವನಿಗಿಂತ ನಾನು ಕಲಿಕೆಯಲ್ಲಿ ಹಿಂದೆ ಎಂಬ ಕೀಳರಿಮೆ ಬಾರದಂತೆ ನೋಡಿಕೊಳ್ಳುವುದೇ ಇದರ ಉದ್ದೇಶ ಎಂದರು.