ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಯತ್ನಾಳ್ ಆಕ್ರೋಶ

Prasthutha|

ಬೆಳಗಾವಿ: ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ರಪಡಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.

Join Whatsapp