ಬೆಳಗಾವಿ: ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ರಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.