Home ಟಾಪ್ ಸುದ್ದಿಗಳು ಮುಡಾ ಅಕ್ರಮ ಆರೋಪ ತನಿಖೆ ಸಿಬಿಐಗೆ ವಹಿಸುವುದಿಲ್ಲ: ಪರಮೇಶ್ವರ್

ಮುಡಾ ಅಕ್ರಮ ಆರೋಪ ತನಿಖೆ ಸಿಬಿಐಗೆ ವಹಿಸುವುದಿಲ್ಲ: ಪರಮೇಶ್ವರ್

ಬೆಂಗಳೂರು: ಮುಡಾ ಅಕ್ರಮ ಆರೋಪ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.


ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಕೇಳುತ್ತಾರೆ ಎಂದು ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದರು.


ಸಿಎಂ ಸಿದ್ದರಾಮಯ್ಯ ಅವರು ಆರೋಪದ ಬಗ್ಗೆ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ? ಸದನದಲ್ಲಿ ಯಾವ ವಿಷಯ ಚರ್ಚೆಗೆ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ, ಹಿಂಜರಿಯುವುದಿಲ್ಲ ಎಂದರು.

Join Whatsapp
Exit mobile version