Home ಟಾಪ್ ಸುದ್ದಿಗಳು ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ: ಸೂಲಿಬೆಲೆ

ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ: ಸೂಲಿಬೆಲೆ

ಪುತ್ತೂರು: ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.


ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ.


2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು ಸ್ವಲ್ಪ ಸಡಿಲ ಮಾಡುತ್ತೇನೆ. ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.

Join Whatsapp
Exit mobile version