ನವದೆಹಲಿ: ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನಿ ಮೋದಿ ಮಿಜೋರಾಂಗೆ ಬಂದರೆ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮಿಜೋರಾಂನ ಜನರೆಲ್ಲರೂ ಕ್ರಿಶ್ಚಿಯನ್ನರು. ಮಣಿಪುರದಲ್ಲಿ ಮೇಟಿ ಜನರು ನೂರಾರು ಚರ್ಚ್ ಗಳನ್ನು ಸುಟ್ಟುಹಾಕಿದಾಗ ಮಿಜೋರಾಂ ಜನರು ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದಾರೆ. ಈ ಸಮಯದಲ್ಲಿ ಬಿಜೆಪಿಯೊಂದಿಗೆ ಸಹಾನುಭೂತಿ ಹೊಂದುವುದು ನಮ್ಮ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುತ್ತದೆ ಎಂದು ಹೇಳಿದ್ದಾರೆ.