Home ಟಾಪ್ ಸುದ್ದಿಗಳು RSS ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ: ಸತೀಶ್ ಜಾರಕಿಹೊಳಿ

RSS ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಆರ್ ಎಸ್ ಎಸ್ ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ ಎಂದು ನೂತನ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್ ಎಸ್ ಎಸ್ ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು ಸೆಳೆಯಬೇಕಿದೆ. ಅವರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆರ್ ಎಸ್ ಎಸ್ ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ ಎಂದರು.

Join Whatsapp
Exit mobile version