ಹಾಡಿ ಜನರ ಆರೋಗ್ಯ ಸುಧಾರಣೆಗೆ ಶ್ರಮಿಸಿ: ಭಂವರ್ ಸಿಂಗ್ ಮೀನಾ

Prasthutha|

ಮಡಿಕೇರಿ: ಹಾಡಿ ಜನರ ಆರೋಗ್ಯ ಬಗ್ಗೆ ಗಮನಹರಿಸಿ ಮೂಲ ಸೌಕರ್ಯ ಕಲ್ಪಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಸೂಚನೆ ನೀಡಿದರು.

- Advertisement -

ವಿರಾಜಪೇಟೆ ತಾಲೂಕಿನ ನಾಲ್ಕೇರಿ ಹಾಗೂ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮಾಡು ಮತ್ತು ಕೊಡಂಗೆ ಹಾಡಿಗಳಿಗೆ ಭೇಟಿ ನೀಡಿ, ಹಾಡಿ ಜನರ ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಲು ತಾಲೂಕು ಆರೋಗ್ಯಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಬೊಮ್ಮಾಡು ಆಶ್ರಮ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಪಡೆದರು.  ಈ ವೇಳೆ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪ್ರೋಟೀನ್ ಆಹಾರ ನೀಡುವಂತೆ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮವಾದ ಪೌಷ್ಟಿಕಾಂಶವುಳ್ಳ ಆಹಾರ ನೀಡಿ, ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.

- Advertisement -

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ಅಮೃತ ಸರೋವರ, ಮೈದಾನ ಅಭಿವೃದ್ಧಿ ಸಂಬಂಧ ತಾಲೂಕಿನ ಶ್ರೀಮಂಗಲ, ಹುದಿಕೇರಿ, ಕೆ.ಬಾಡಗ, ಪೊನ್ನಂಪೇಟೆ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಸ್ಥಳ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ವಿರಾಜಪೇಟೆ ತಾ.ಪಂ. ಅಧಿಕಾರಿ ಕೆ.ಸಿ.ಅಪ್ಪಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್. ವೆಂಕಟೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಯತಿರಾಜ್, ಐಟಿಡಿಪಿ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ಸಿಡಿಪಿಒ ರಾಜೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್, ರಾಜೇಶ್, ಪುಟ್ಟರಾಜು, ಪೂಣಚ್ಚ, ಸ್ಥಳೀಯ ವೈದ್ಯರು, ತಾಂತ್ರಿಕ ಸಂಯೋಜಕರಾದ ನಿರಂಜನ್, ತಾಂತ್ರಿಕ ಸಹಾಯಕ ಅಭಿಯಂತರರಾದ ಹೇಮಂತ್, ತಾಲ್ಲೂಕು ಐ.ಇ.ಸಿ.ಸಂಯೋಜಕರಾದ ನರೇಂದ್ರ ಇತರರು ಜೊತೆಗಿದ್ದರು.

Join Whatsapp