ಮಂಗಳೂರು: ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು ಎಂದರು. ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದರು.