Home ಟಾಪ್ ಸುದ್ದಿಗಳು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ : ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ : ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.

2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

Join Whatsapp
Exit mobile version