ನಿವೃತ್ತಿ ವರದಿ ತಳ್ಳಿಹಾಕಿದ ವಿಶ್ವ ಚಾಂಪಿಯನ್ ಮೇರಿ ಕೋಮ್

Prasthutha|

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬಾಕ್ಸಿಂಗ್ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬ ವರದಿಗಳನ್ನು ಗುರುವಾರ ತಳ್ಳಿಹಾಕಿದ್ದಾರೆ.

- Advertisement -


ಬುಧವಾರ ಅವರು ತಮ್ಮ ಬಾಕ್ಸಿಂಗ್ ಕೆರಿಯರ್ ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮೇರಿ ಕೋಮ್, ತನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ನಾನು ಯಾವುದೇ ನಿವೃತ್ತಿ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
“ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ನನ್ನ ಮಾತನನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ನಿವೃತ್ತಿ ಘೋಷಿಸಲು ಬಯಸಿದಾಗ ನಾನು ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬಂದು ತಿಳಿಸುತ್ತೇನೆ. ಹೀಗಾಗಿ ಪ್ರಸ್ತುತ ಹರಿದಾಡುತ್ತಿರುವ ಸುದ್ದಿಗಳು ನಿಜವಲ್ಲ ಎಂದು ಮೇರಿ ಕೋಮ್ ಹೇಳಿದ್ದಾರೆ.


ಜನವರಿ 24, 2024 ರಂದು ದಿಬ್ರುಗಢ್ನಲ್ಲಿ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇರಿ ಕೋಮ್, ನಾನು ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ನನಗೆ ಇನ್ನೂ ಸ್ಪರ್ಧಿಸುವ ಹಸಿವು ಇದೆ. ಆದರೆ ಅಂತರಾಷ್ಟ್ರೀಯ ಬಾಕ್ಸಿಂಗ್ ಫೆಡರೇಶನ್ ನಿಯಮಗಳು ನನಗೆ ಹಾಗೆ ಮಾಡಲು ಅನುಮತಿಸುವುದಿಲ್ಲ. ಪುರುಷ ಮತ್ತು ಮಹಿಳಾ ಬಾಕ್ಸರ್ ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಹೋರಾಡಲು ಅವಕಾಶವಿದೆ ಎಂದು ತಿಳಿಸಿದ್ದರು.



Join Whatsapp