ಬೆಂಗಳೂರು; ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ಈ ಬಾರಿಯ ದಸರಾ ಮಹೋತ್ಸವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ, ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.