Home ಟಾಪ್ ಸುದ್ದಿಗಳು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.


ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನಾಡೋಜ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ನವರಾತ್ರಿ ಉತ್ಸವವನ್ನು ಉದ್ಘಾಟಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಮೈಸೂರಿನಿಂದ ಕೆಎಸ್ಸಾರ್ಟಿಸಿ ಐರಾವತ ಬಸ್ ನಲ್ಲಿ ಆಗಮಿಸಿದರು. ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ತಂಡಕ್ಕೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

Join Whatsapp
Exit mobile version