WPL 2024: ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಸೋಲನುಭವಿಸಿದ ಆರ್​ಸಿಬಿ

Prasthutha|

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 25 ರನ್​ಗಳಿಂದ ಸೋಲು‌ ಅನುಭವಿಸಿದೆ. ಈ ಮೂಲಕ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ.

- Advertisement -

ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನೆಕ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸಿಂಗ್ ಶೋಬನಾ, ರೇಣುಕಾ ಸಿಂಗ್ ಠಾಕೂರ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.

Join Whatsapp