ರಾಷ್ಟ್ರ ಮಟ್ಟದ ಕುಸ್ತಿಪಟು ನಿಶಾ ದಹಿಯಾ, ಸಹೋದರನ ಗುಂಡಿಕ್ಕಿ ಹತ್ಯೆ| ವಾಸ್ತವಾಂಶವೇನು?

Prasthutha|

ಹೊಸದಿಲ್ಲಿ: ಹರ್ಯಾಣದ ಸೋನೆಪತಲ್ ಹಲಾಲ್ ಪುರದಲ್ಲಿರುವ ಸುಶೀಲ್ ಕುಮಾರ್ ವ್ರೆಸ್ಲಿಂಗ್ ಅಕಾಡೆಮಿಯಲ್ಲಿ ರಾಷ್ಟ್ರ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಮತ್ತು ಆಕೆಯ ಸಹೋದರನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿತ್ತು.
ಘಟನೆಯಿಂದ ನಿಶಾ ದಹಿಯಾ ಅವರ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.

- Advertisement -

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋ ಫೇಕ್ ಆಗಿದ್ದು, ನಾನಿನ್ನು ಜೀವಂತವಾಗಿದ್ದೇನೆಂದು ನಿಶಾ ದಹಿಯಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಸಹೋದರನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ವರದಿಗಳು ವೈರಲ್ ಆದ ನಂತರ, ಅಥ್ಲೀಟ್ ಇನ್ಸ್ಟಾ ಗ್ರಾಮ್ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿ ವದಂತಿಗಳು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಸೆರ್ಬಿಯಾದ ಬೆಲ್ ಗ್ರೇಡ್ ನಲ್ಲಿ ನಡೆದ ಚಾಂಪಿಯನ್ ಶಿಪ್ ನಲ್ಲಿ ಪದಕಗಳನ್ನು ಗೆದ್ದ ಭಾರತೀಯರ ಪೈಕಿ ದಹಿಯಾ ಕೂಡ ಒಬ್ಬರು. ಆಕೆಯ ಸಾಧನೆಗೆ ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ ಶ್ಲಾಘಿಸಿದ್ದರು.

Join Whatsapp