ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು

Prasthutha|

ಹೊಸದಿಲ್ಲಿ: ಇನ್ನುಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ.

- Advertisement -

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಹಾಗೂ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಒಂದು ತಿಂಗಳುಗಳ ಕಾಲ ದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ನಡೆಸಿದ್ದರು.

ಇದಾದ ಬಳಿಕ ಪೊಲೀಸರು ಅಲ್ಲಿ ಪ್ರತಿಭಟನೆ ಮಾಡಲು ಅನುಮತಿಯನ್ನು ನಿರಾಕರಿಸಿದ್ದರು. ಅಮಿತ್ ಶಾ ಅವರೊಂದಿಗೆ ಎರಡು ಸಭೆಗಳನ್ನು ನಡೆಸಿ ಅದು ವಿಫಲವಾಗಿತ್ತು. ಜತೆಗೆ ಸಚಿವ ಅನುರಾಗ್ ಠಾಕೂರ್ ಅವರ ಜತೆಯೂ ಸಭೆ ನಡೆಸಿದ್ದರು. ಇದೀಗ ತಮ್ಮ ಚಳವಳಿಯನ್ನು ನ್ಯಾಯಾಲಯದಲ್ಲಿ ಮಾಡುವುದಾಗಿ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಒಂದೇ ರೀತಿಯ ಟ್ವೀಟ್​ಗಳನ್ನು ಮಾಡಿದ್ದಾರೆ.

- Advertisement -

ಈ ಪ್ರಕರಣದಲ್ಲಿ ನಮಗೆ ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆಯುತ್ತದೆ ಆದರೆ ಹೋರಾಟ ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ಎಂದು ಹೇಳಿದ್ದಾರೆ.