ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

Prasthutha|

ನವದೆಹಲಿ: ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ.

- Advertisement -


ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ.


ಮುಂದಿನ 45 ದಿನಗಳಲ್ಲಿ (ಜುಲೈ 15 ರೊಳಗೆ) ಭಾರತದ ಕುಸ್ತಿ ಫೆಡರೇಶನ್ ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

- Advertisement -

ಭಾರತೀಯ ಕುಸ್ತಿಪಟುಗಳ ಸರಣಿ ಪ್ರತಿಭಟನೆಗಳು ಮತ್ತು ವಿವಿಧ ರಾಜ್ಯ ಘಟಕಗಳ ಕಾನೂನು ಅರ್ಜಿಗಳ ಕಾರಣದಿಂದಾಗಿ ಚುನಾವಣೆಗಳನ್ನು ಪದೇ ಪದೇ ಮುಂದೂಡಲಾಗಿದೆ. ಭಾರತದ ಪ್ರಮುಖ ಕುಸ್ತಿಪಟುಗಳು ಅದರ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಹಾಗೂ ಅದರ ಆಗಿನ ಅಧ್ಯಕ್ಷ ಬ್ರಿಜ್ ಭೂಷಣ್ , ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದಾಗ ಡಬ್ಲ್ಯುಎಫ್ ಐ ಅನ್ನು ಮೊದಲು ಜನವರಿಯಲ್ಲಿ ಹಾಗೂ ನಂತರ ಮೇ ತಿಂಗಳಲ್ಲಿ ಅಮಾನತುಗೊಳಿಸಲಾಯಿತು.



Join Whatsapp