Home ಟಾಪ್ ಸುದ್ದಿಗಳು ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ನ ವಾರದ ರಜೆ ಮುಗಿದ ಬಳಿಕ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುತ್ತಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

Join Whatsapp
Exit mobile version