ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಅವರ ಪತ್ನಿ ಸತ್ಯಭಾಮ( 76 ) ಇಂದು ಬೆಳಿಗ್ಗೆ 6-15 ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಕಳೆದ ಜನವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಬೆಳಿಗ್ಗೆ 9-30 ಕ್ಕೆ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.