ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಣೆಗೆ ಚಿಂತನೆ : ಯಡಿಯೂರಪ್ಪ

Prasthutha|

ಬೆಂಗಳೂರು : ರಾಜ್ಯದ ಕೊರೊನಾ ಹೆಚ್ಚಿರುವ ಮತ್ತಷ್ಟು ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ವಿಸ್ತರಣೆ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೊರತುಪಡಿಸಿ ಉಳಿದೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಬಿಟ್ಟು ಉಳಿದೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಅಗತ್ಯ ಬಿದ್ದರೆ ಇನ್ನೂ 2 ದಿನ ಕೊರೊನಾ ಕರ್ಪ್ಯೂ ಮುಂದುವರೆಸುತ್ತೇವೆ. ವೀಕೆಂಡ್ ಲಾಕ್ ಡೌನ್ ಬಗ್ಗೆಯೂ ಯಾವುದೇ ಪ್ರಸ್ತಾಪ ಇಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

- Advertisement -

ಏಪ್ರಿಲ್ 18 ರಂದು ಸರ್ವ ಪಕ್ಷಗಳ ಸಭೆ ಕರೆಯಲಾಗಿದ್ದು, ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಸರ್ವಪಕ್ಷಗಳ ಸಭೆ ಬಳಿಕ ನಿರ್ಧಾರ ಮಾಡಲಾಗುವುದು. ಎಲ್ಲಾ ಪಕ್ಷಗಳ ಜೊತೆಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ವಿಸ್ತರಣೆ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -