ಆಕಸ್ಮಾತ್ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಬಿ.ಎಸ್.ವೈ

Prasthutha|

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಆಕಸ್ಮಾತ್ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

- Advertisement -

ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಈ ಕುರಿತು ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ತಮ್ಮಿಂದ ಅಗತ್ಯವಿರುವ ನೆರವು ನೀಡುತ್ತೇನೆ. ಮುಂಬರುವ ದಿನಗಳಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇವೆ. ಪಕ್ಷ ಬಲವರ್ದನೆಗೆ ತಾವು ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಯತ್ನಿಸುವುದಾಗಿ ತಿಳಿಸಿದರು.

ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ.



Join Whatsapp