ಪ್ರದರ್ಶನ ನೀಡುತ್ತಿದ್ದ ವೇಳೆ ರಂಗಸ್ಥಳದಲ್ಲೇ ಕುಸಿದುಬಿದ್ದ ಯಕ್ಷಗಾನ ಕಲಾವಿದ ನಿಧನ

Prasthutha|

ಉಡುಪಿ : ಪ್ರದರ್ಶನ ನೀಡುತ್ತಿದ್ದ ವೇಳೆ ರಂಗಸ್ಥಳದಲ್ಲೇ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ವೇಷದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟುವಿನಲ್ಲಿ ಈ ಘಟನೆ ನಡೆದಿದ

- Advertisement -

ಸಾಧು ಕೊಠಾರಿ ಅವರು ಮಹಾಕಲಿ ಮಗದೇಂದ್ರ ಪ್ರಸಂಗದಲ್ಲಿ ಮಗಧನಾಗಿ ಪ್ರದರ್ಶನ ನೀಡುತ್ತಿದ್ದರು. ಈ ವೇಳೆ ಪ್ರದರ್ಶನದಲ್ಲಿ ಕುಣಿಯುತ್ತಿದ್ದಾಗ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತಿತ್ತು. ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.



Join Whatsapp