ಮಾಜಿ ಶಾಸಕ, ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ

Prasthutha|

ಮಂಗಳೂರು: ಮಾಜಿ ಶಾಸಕ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ನಿಧನರಾಗಿದ್ದಾರೆ.

- Advertisement -

ಅವರಿಗೆ 88 ವರ್ಷ ವಯಸ್ಸಾಗಿತ್ತು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು.  ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ  ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಲಭಿಸಿತ್ತು.

- Advertisement -

ಸುಂದರ್‌ ರಾವ್‌ ಅವರು, ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Join Whatsapp