ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆ ನಿಷೇಧ ಮಾಡಿದ್ದ ರಾಜ್ಯ ಸರ್ಕಾರದ ಆದೇಶ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್, ಯಕ್ಷಗಾನ ಪ್ರದರ್ಶನದ ಅವಧಿಯನ್ನು ರಾತ್ರಿ 12 ಗಂಟೆಯವರೆಗೂ ವಿಸ್ತರಣೆ ಮಾಡಿದ್ದು, ಜಿಲ್ಲಾಧಿಕಾರಿಯವರ ತಾರತಮ್ಯ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶವು ಯಕ್ಷಗಾನದ ಮೇಲೆ ಪರಿಣಾಮ ಬೀರಿತ್ತು. ಇದಕ್ಕೆ ಹಲವು ಯಕ್ಷಗಾನ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದರು. ಅವಧಿ ಕಡಿತಗೊಳಿಸಿರುವುದನ್ನು ಖಂಡಿಸಿ ‘ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ’ಯು (ಕಟೀಲು ಮೇಳ) ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.