Home Uncategorized ರಾಜ್ಯದಲ್ಲಿ ಮತ್ತೆ ಯಶಸ್ವಿನಿ ಯೋಜನೆ ಜಾರಿ: ಸೋಮಶೇಖರ್

ರಾಜ್ಯದಲ್ಲಿ ಮತ್ತೆ ಯಶಸ್ವಿನಿ ಯೋಜನೆ ಜಾರಿ: ಸೋಮಶೇಖರ್

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ.ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್ಗಳು ಇದ್ದು, 5,477 ಪ್ಯಾಕ್ಸ್ ಸಹಕಾರ ಸಂಘಗಳು ಇವೆ. ಎಲ್ಲಾ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದ್ದು, ಶೇ.99 ರಷ್ಟು ಸಾಲವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದರು.

Join Whatsapp
Exit mobile version