ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ದೂರು ದಾಖಲು

Prasthutha|

ಬೆಂಗಳೂರು: ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.

- Advertisement -


ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಟಾಕ್ಸಿಕ್ ಚಿತ್ರಕ್ಕಾಗಿ ನಿರ್ಮಿಸಿರುವ ಬೃಹತ್ ಸೆಟ್ ನಿಂದ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದ್ದಾರೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದೆ.


ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ. ಈ ಸಂಬಂಧ ಹೈಕೋರ್ಟ್ ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮ್ತತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.

- Advertisement -

ಯಶ್ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.



Join Whatsapp