ನವದೆಹಲಿ: ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್ ಎಫ್) ಮುಖ್ಯಸ್ಥ ಯಾಸಿನ್ ಮಲಿಕ್ ಭಯೋತ್ಪಾದನೆಗೆ ಹಣಕಾಸು ನೆರವು ಸೇರಿದಂತೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ತಿಹಾರ್ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ತಿಹಾರ್ ಜೈಲಿನ ಜೈಲು ಸಂಖ್ಯೆ 7 ರಲ್ಲಿ ಬಂಧಿಯಾಗಿರುವ ಮಲಿಕ್, ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಜುಲೈ 22 ರಿಂದ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
2019 ರಲ್ಲಿ ಜೆಕೆಎಲ್ಎಫ್ ಅನ್ನು ನಿಷೇಧಿಸಿದ ನಂತರ ಮಲಿಕ್ ಅವರನ್ನು ಈ ವರ್ಷ ಮೇ 19 ರಂದು ಎನ್ ಐಎ ನ್ಯಾಯಾಲಯವು ಭಯೋತ್ಪಾದಕ ಧನಸಹಾಯ ಪ್ರಕರಣಗಳಲ್ಲಿ ದೋಷಿ ಎಂದು ಘೋಷಿಸಿ ಮೇ 25 ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.