ವಾರದೊಳಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ್

Prasthutha|

ಬೆಳಗಾವಿ: ‘ವಾರದೊಳಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

- Advertisement -

ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ನಲ್ಲಿ ಪಾಲ್ಗೊಂಡು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲಿ ಇಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದೆ. ಇನ್ನೊಂದು ವಾರದಲ್ಲಿ ಅವರು ಕೈಗೊಳ್ಳಲಿರುವ ಕ್ರಮವು ಅವರು ಮಾಜಿ ಮುಖ್ಯಮಂತ್ರಿಯ ನೆರಳಿನಲ್ಲಿ ಇಲ್ಲ ಎನ್ನುವುದನ್ನು ತಿಳಿಯಬಹುದು. ಕಾದು ನೋಡಿ’ ಎಂದು ಹೇಳಿದರು.

‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಲು ಯಡಿಯೂರಪ್ಪ ಮನಸ್ಸು ಮಾಡಲಿಲ್ಲ. ಅವರಿಗೆ ಸಮಾಜದ ಶಾಪ ತಟ್ಟಿದೆ. ಮಾಜಿ ಮುಖ್ಯಮಂತ್ರಿಯಾಗಿ, ಅಧಿವೇಶನದಲ್ಲಿ ನಮ್ಮ ಸಾಲಿನಲ್ಲಿ ಕೂರುವಂತಾಯಿತು’ ಎಂದರು.



Join Whatsapp