ನವದೆಹಲಿ: ಇತ್ತೀಚೆಗೆ ನಡೆದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಮುಸ್ಲಿಮರ ನರಮೇಧ ಮತ್ತು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧಿತ ಸಂಘಪರಿವಾರದ ಮುಖಂಡ, ಗಾಝಿಯಾಬಾದ್ ದಾಸ್ನಾ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಹಾನಂದ ಎಂಬಾತನನ್ನು ಹರಿದ್ವಾರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಐಪಿಸಿ ಸೆಕ್ಷನ್ 295 ಎ, 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ರೋಶನಾಬಾದ್ ಜೈಲಿಗೆ ಕಳುಹಿಸಲಾಗಿದೆ ಎಂದು ಹರಿದ್ವಾರ ಪೊಲೀಸ್ ಠಾಣಾಧಿಕಾರಿ ರಕಿಂದರ್ ಸಿಂಗ್ ಕಥೈತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.