ಮುಸ್ಲಿಮರ ನರಮೇಧಕ್ಕೆ ಕರೆ: ಯತಿ ನರಸಿಂಹಾನಂದಗೆ 14 ದಿನಗಳ ನ್ಯಾಯಾಂಗ ಬಂಧನ

Prasthutha|

ನವದೆಹಲಿ: ಇತ್ತೀಚೆಗೆ ನಡೆದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಮುಸ್ಲಿಮರ ನರಮೇಧ ಮತ್ತು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧಿತ ಸಂಘಪರಿವಾರದ ಮುಖಂಡ, ಗಾಝಿಯಾಬಾದ್ ದಾಸ್ನಾ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಹಾನಂದ ಎಂಬಾತನನ್ನು ಹರಿದ್ವಾರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಐಪಿಸಿ ಸೆಕ್ಷನ್ 295 ಎ, 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ರೋಶನಾಬಾದ್ ಜೈಲಿಗೆ ಕಳುಹಿಸಲಾಗಿದೆ ಎಂದು ಹರಿದ್ವಾರ ಪೊಲೀಸ್ ಠಾಣಾಧಿಕಾರಿ ರಕಿಂದರ್ ಸಿಂಗ್ ಕಥೈತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Join Whatsapp