Home ಟಾಪ್ ಸುದ್ದಿಗಳು ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

ಹಾಸನ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಅಧಿವೇಶನ ನಡೆದಿರುವುದು ನೋಡಿದಿರಲ್ಲ, ಎಲ್ಲಿ ಜೋಡೆತ್ತು? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಒಂದು ದೆಹಲಿಗೆ ಹೋಗಿದೆ. ಒಂದು ಬೆಂಗಳೂರಿನಲ್ಲಿದೆ. ಜೋಡೆತ್ತುಗಳು ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದಿದ್ದರು. ಪಾಪ ಒಂದು ಎತ್ತನ್ನು ಬಿಟ್ಟು ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ವಿ. ಸೋಮಣ್ಣ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಬಗ್ಗೆ ಪತ್ರಕರ್ತರು ಕೇಳಿದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಕಲ್ಪನೆ. ಹಾಗಾಗಿ ಯಾರೂ ಕೂಡ ಪಕ್ಷ ಬಿಡುವುದಿಲ್ಲ. ಹಿಂದೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದರಲ್ಲ ಆ ಲೀಡರ್ ಹಾಗೇ ಯಾರೂ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version