ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

Prasthutha|

ಯಾದಗಿರಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಇವರ ಪುತ್ರನೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಪೂಜ್ಯ ತಂದೆ-ಮಕ್ಕಳು ಎಲ್ಲರನ್ನೂ ಮುಗಿಸಬೇಕೆಂದು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಯಾದಗಿರಿಯಲ್ಲಿ ಮಾತನಾಡಿದ ಯತ್ನಾಳ್, ನನಗೆ ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಕ್ಷೇತ್ರದಿಂದ ಆಯ್ಕೆ ಕೊಟ್ಟಿದ್ದರು. ನನಗೆ ಕೇಂದ್ರ ಮಂತ್ರಿ ಮಾಡುತ್ತೇನೆ ಅಂದರೂ ನಿಲ್ಲುವುದಿಲ್ಲ ಅಂದಿದ್ದೇನೆ. ನಾನು ದೆಹಲಿಗೆ ಹೋದರೆ ಇಲ್ಲಿ ಅಪ್ಪ-ಮಗನ ರಾಜ್ಯ ನಡೆಯುತ್ತದೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.



Join Whatsapp