ಯಡಿಯೂರಪ್ಪ ವಿರುದ್ಧದ ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ಎಂದ ಯತ್ನಾಳ್

Prasthutha|

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ನೀಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಜೊತೆ ರಾಜಿ ಮಾಡಿಕೊಂಡಿಲ್ಲ. ಆದರೆ, ಪಕ್ಷದ ಸೂಚನೆ ಮೇರೆಗೆ ಅವರೊಂದಿಗಿನ ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ಇಡುತ್ತೇನೆ.
ಯಡಿಯೂರಪ್ಪ ಕುರಿತು ನನಗೆ ಪ್ರಶ್ನೆಗಳನ್ನೆ ಕೇಳಬೇಡಿ, ಅವರ ಬಗ್ಗೆ ಅಪಾರ ಗೌರವ ಇದೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪಗೆ ಬಯ್ಯೋದು ಬೇಡ ಅವರು ಹಿರಿಯರು ಇದ್ದಾರೆ. ಅವರ ಬಗ್ಗೆ ಮಾತನಾಡಬೇಡಿ ಎಂದು ಹೈಕಮಾಂಡ್ ಸೂಚಿಸಿದೆ ಎಂದರು.
ಚಿಲ್ಲರೆ ರಾಜಕಾರಣಿಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆಯೂ ಹೈಕಮಾಂಡ್ ಸೂಚಿಸಿದೆ ಎಂದರು.

Join Whatsapp
Exit mobile version