Home ಟಾಪ್ ಸುದ್ದಿಗಳು ಯತ್ನಾಳ್‌ಗೆ ಮುಸ್ಲಿಂ ಮುಖಂಡರಿಂದ ಸಿ.ಡಿ ಶಾಕ್

ಯತ್ನಾಳ್‌ಗೆ ಮುಸ್ಲಿಂ ಮುಖಂಡರಿಂದ ಸಿ.ಡಿ ಶಾಕ್

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ.


ಇಂದು ವಿಜಯಪುರದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.


ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಸೇರಿದಂತೆ ಹಲವರು ಮಾತನಾಡಿ ಯತ್ನಾಳ್ ಗೆ ಸಿಡಿ ಎಚ್ಚರಿಕೆ ಕೊಟ್ಟಿದ್ದಾರೆ.


ಈ ವೇಳೆ ಮಾತನಾಡಿದ ಎಸ್ ಎಸ್ ಖಾದ್ರಿ, ತಿ…… ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್ 06ರಂದು ಸಿಡಿ ಬಿಡುಗಡೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು.


ಇದಕ್ಕೆ ಧ್ವನಿಗೂಡಿಸಿದ ಮಾಜಿ ಕಾರ್ಪೊರೇಟರ್ ಅಬ್ದುಲ್ ರಜಾಕ್ ಹೊರ್ತಿ, ನಾನೇನು ಬ್ಲಾಕ್ಮೇಲ್ ಮಾಡುತ್ತಿಲ್ಲ. ಕೋರ್ಟ್ ನಿಂದ ತಮ್ಮ ವಿರುದ್ದ ಮಾನಹಾನಿ ವರದಿ ಪ್ರಸಾರ ಮಾಡದಂತೆ ತಡಯಾಜ್ಞೆ ತಂದಿದ್ದರ ಕುರಿತು ಯತ್ನಾಳ್ ಗೆ ಪ್ರಶ್ನಿಸಿ. ತಡೆಯಾಜ್ಞೆ ಯಾವುದಕ್ಕೆ ತಂದಿದ್ದಾರೆ ಎಂಬುದು ಯತ್ನಾಳ್ ಅವರಿಗೆ ಗೊತ್ತು ಎಂದು ವ್ಯಂಗ್ಯವಾಡಿದರು.

Join Whatsapp
Exit mobile version