Home ಟಾಪ್ ಸುದ್ದಿಗಳು ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಯತ್ನಾಳ್ ಗೆ ಸಾರ್ವಜನಿಕರಿಂದ ತೀವ್ರ ತರಾಟೆ

ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಯತ್ನಾಳ್ ಗೆ ಸಾರ್ವಜನಿಕರಿಂದ ತೀವ್ರ ತರಾಟೆ

ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದ ಯತ್ನಾಳ್

ಬಾಗಲಕೋಟೆ: ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಯತ್ನಾಳ್ ವಕ್ಫ್ ಹೆಸರು ಎತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಇಲ್ಲಿ ರಾಜಕೀಯ ಮಾಡಬೇಡಿ ಎಂದು ಯತ್ನಾಳ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಯತ್ನಾಳ್ ಕಾರ್ಯಕ್ರಮದಿಂದ ಹೊರ ನಡೆದರು.


ಇಲ್ಲಿ ರಾಜಕೀಯ ಮಾಡಬೇಡಿ. ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡ್ತೀರಿ? ದೇವಸ್ಥಾನ ನಿರ್ಮಾಣಕ್ಕೆ ಎಲ್ಲಾ ಸಮುದಾಯ ದೇಣಿಗೆ ಕೊಟ್ಟಿದೆ. ಮುಸ್ಲಿಮರು 6 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆಂದು ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಯತ್ನಾಳ್ ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದರು.

Join Whatsapp
Exit mobile version