ಬೆಂಗಳೂರು: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನು ಅಪೇಕ್ಷೆಪಟ್ಟಿಲ್ಲ. ಕಾಂಗ್ರೆಸ್ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ. ನಾನು ವಿರೋಧ ಪಕ್ಷದ ನಾಯಕನಾದರೆ ಮಜಾ ಇರುತ್ತೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಐಎಬಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ. ನಾನು ವಿರೋಧ ಪಕ್ಷದ ನಾಯಕನಾದರೆ ಮಜಾ ಇರುತ್ತೆ. ಯುಟಿ ಖಾದರ್, ಜಮೀರ್ ಯಾರೆ ಸ್ಪೀಕರ್ ಆದ್ರೂ ಅವರಿಗೆ ಹಿಂದೂ ವಿರೋಧಿಯಾಗಿ ವರ್ತಿಸಲು ಸಾಧ್ಯವಿಲ್ಲ. ಸಂವಿಧಾನದಂತೆ ನಡೆಯಬೇಕು ಎಂದು ಹೇಳಿದರು.
ಡಿಕೆ ಶಿವಕುಮಾರ್ ಪೊಲೀಸ್ ಠಾಣೆಗಳನ್ನು ಹಸಿರೀಕರಣ ಮಾಡಿ ಪಾಕಿಸ್ತಾನ ಮಾಡಲು ಹೊರಟಿದ್ದಾರಾ? ಕೇಸರಿ ಈ ಧರ್ಮದ, ದೇಶದ ಸಂಕೇತ. ಪೊಲೀಸರು ಕೇಸರಿಶಾಲು ಹಾಕ್ಕೊಂಡ್ರೆ ತಪ್ಪೇನಿದೆ. ಕೇಸರಿಯನ್ನು ವಿರೋಧ ಮಾಡಿದವರಿಗೆ ಉಳಿಗಾಲವಿಲ್ಲ. ಕೆಲ ಗ್ಯಾರಂಟಿ ಕಾರ್ಡ್ ಗಳಿಂದ ಆರಿಸಿ ಬಂದಿದ್ದಾರೆ. ಶೀಘ್ರದಲ್ಲೇ ಗ್ಯಾರಂಟಿ ಕಾರ್ಡ್ ಗಳು ಮುಗಿಯುತ್ತವೆ ಎಂದು ಕಿಡಿಕಾರಿದರು.
2024ಕ್ಕೆ ಮತ್ತೆ ಮೋದಿ ಪ್ರಧಾನಿಯಾಗಲಿದ್ದಾರೆ. ದೇಶ ಹಿಂದೂ ದೇಶವಾಗಲಿದೆ. ಇಂತಹ ನೂರು ಡಿಕೆ ಶಿವಕುಮಾರ್ಗಳು ಬಂದರು ಏನು ಆಗೋದಿಲ್ಲ. ಕಾಂಗ್ರೆಸ್ನವರು ಏನು ಬಹಳ ಸಾಚಾ ಇದ್ದಾರ ನೊಡೋಣ. ಕಾಂಗ್ರೆಸ್ ಬಂದ ಮೇಲೆ ದೇಶ ದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಪಾಕಿಸ್ತಾನ ಧ್ವಜಗಳು ಹಾರಾಡುತ್ತಿವೆ. ರಾಜ್ಯದಲ್ಲಿ ಬಿಜೆಪಿ ಮುಗಿದು ಹೋಗಿಲ್ಲ, ನಾವು ಹೋರಾಟ ಮಾಡುತ್ತೇವೆ. 66 ಜನ ನಾವು ವಿರೋಧ ಪಕ್ಷದಲ್ಲಿದ್ದೇವೆ. ಐದು ವರ್ಷ ಅವರು ಏನ್ಮಾಡಿದ್ರು ನಡೆಯುತ್ತೆ ಅನ್ನೋದಿಲ್ಲ. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು 135 ಅಲ್ಲ 200 ಬಂದ್ರು ಏನು ಬೇಕಾದರೂ ಆಗಬಹುದು. ಮಹಾರಾಷ್ಟ್ರದಲ್ಲಿ ಏನಾಯಿತು ಅನ್ನೋದು ಗೊತ್ತಲ್ವ ಎಂದು ವಾಗ್ದಾಳಿ ಮಾಡಿದ್ದಾರೆ.