ನಮ್ಮ ನಡುವೆ ಆತ್ಮೀಯತೆ ಇದೆ: ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಯತ್ನಾಳ್

Prasthutha|

- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾಕೋ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಬಹಳ ಸೈಲೆಂಟ್ ಆಗಿದ್ದಾರೆ. ಯಾಕೆ ಸೈಲೆಂಟ್ ಆಗಿದ್ದೀರಾ ಎಂದು ನಾನು ಸಿದ್ದರಾಮಯ್ಯ ಅವರಿಗೆ ಕೇಳಿದ್ದೆ. ಏನು ಮಾಡೋದು ಯತ್ನಾಳ್ ಇದು ಕೊನೆದಿದೆ. ಯಾರು ಏನೇ ಹೇಳಿದರೂ ತಲೆ ಕೊಡಿಸಿಕೊಳ್ಳಲ್ಲ. ಜನರಿಗೆ ಉತ್ತಮ ಆಡಳಿತ ನೀಡುತ್ತೇನೆ ಅಂದಿದ್ದರು ಎಂದು ಹೇಳಿದರು.