Home ಟಾಪ್ ಸುದ್ದಿಗಳು ನಿಯಮ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ನಿಯಮ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್ ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.


ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಫ್ಯಾಕ್ಟರಿಗೆ ನೀಡಿರುವ ವಿದ್ಯುತ್, ನೀರಿನ ಸಂರ್ಪಕ ಕಡಿತಗೊಳಿಸುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಕೆಎಸ್ಪಿಸಿಬಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಿದೆ.

Join Whatsapp
Exit mobile version