ಕುತಂತ್ರದಿಂದ ಯತ್ನಾಳ್‌ಗೆ ವಿಪಕ್ಷ ನಾಯಕ ಸ್ಥಾನ ತಪ್ಪಿಸಲಾಗಿದೆ: ಬಸವ ಮೃತ್ಯುಂಜಯ ಸ್ವಾಮೀಜಿ

Prasthutha|

ವಿಜಯಪುರ: ಕುತಂತ್ರದಿಂದ ಬಸನನೌಡ ಪಾಟೀಲ್ ಯತ್ನಾಳ್‌ಗೆ ವಿಪಕ್ಷ ನಾಯಕ ಸ್ಥಾನ ತಪ್ಪಿಸಲಾಗಿದೆ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಸಹಕಾರ ತೋರಿದ ಮನಸ್ಸುಗಳ ಒಳಸಂಚು ಮತ್ತು ಕುತಂತ್ರ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಯತ್ನಾಳ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕು ಎಂದು ಸಮಾಜ ಕೇಳಿರಲಿಲ್ಲ. ಆದರೆ ಬಿಜೆಪಿಯಲ್ಲಿ ಯತ್ನಾಳ ಅವರಷ್ಟು ಜನಪ್ರಿಯ ನಾಯಕ ಸದ್ಯ ಯಾರೂ ಇರಲಿಲ್ಲ. ಎಲ್ಲರೂ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು ಎಂದು ಹೇಳಿದ್ದಾರೆ. ಕೊನೆ ಗಳಿಗೆಯಲ್ಲಿ ಅವರಿಗೆ ಅನ್ಯಾಯವಾಗಿದೆ ಎಂದರು.

ಇದರಿಂದಾಗಿ ನಮ್ಮ ಸಮಾಜದಲ್ಲಿ ದೊಡ್ಡ ಅಸಮಾಧಾನ ಉಂಟಾಗಿದೆ. ಸಮಾಜದವರು ಸೇರಿದಂತೆ ಉತ್ತರ ಕರ್ನಾಟಕದವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂದರು.



Join Whatsapp