Home ಟಾಪ್ ಸುದ್ದಿಗಳು ಉತ್ತರ ಕರ್ನಾಟಕದಲ್ಲಿ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ: ವಿಜಯೇಂದ್ರ ಹೇಳಿದ್ದೇನು?

ಉತ್ತರ ಕರ್ನಾಟಕದಲ್ಲಿ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ: ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು: ಮುಡಾ ಪ್ರಕರಣದ ವಿರುದ್ಧ ಉತ್ತರ ಕರ್ನಾಟಕದ ಭಾಗದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಬಿಜೆಪಿ ಬಣವಾಗಿ ಭಾಗವಾಗಿದೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿದೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾಧ್ಯಮಗಳ ಜೊತೆ ಮಾತನಾಡಿ, ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿದರು.


ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಕೆಲವು ಬಿಜೆಪಿ ಶಾಸಕರು ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಯತ್ನಾಳ್ ಮತ್ತು ಇತರ ಶಾಸಕರು ಮಾಡಬೇಕೆಂದಿರುವ ಪಾದಯಾತ್ರೆಗೆ ನನ್ನ ತರಕಾರು ಇಲ್ಲ ಎಂದು ಹೇಳಿದರು.


ಪಕ್ಷದ ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ಪ್ರಯತ್ನ ಮಾಡಿಕೊಂಡು ಬಂದಿದ್ದೇನೆ. ಯತ್ನಾಳ್ ಅವರ ಉದ್ದೇಶಿತ ಪಾದಯಾತ್ರೆಗೆ ತನ್ನದೇನು ತಕರಾರಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

Join Whatsapp
Exit mobile version