ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ ಅರೆಸ್ಟ್

Prasthutha|

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಖಡ್ಗವನ್ನು ಸಾರ್ವಜನಿಕವಾಗಿ ಝಳಪಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.


ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp