ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಡಿಯೂರಪ್ಪ: ಸಿಎಂ ಬೊಮ್ಮಾಯಿ ಸಂತಸ

Prasthutha|

ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

- Advertisement -

ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಅವರು ಕರೆ ಮಾಡಿ ಶುಭ ಕೋರಿದರು.
ತಾವು ಈ ಹುದ್ದೆಗೆ ಏರಿರುವುದರಿಂದ ಕರ್ನಾಟಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. 2023 ರಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. ತಮ್ಮನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.



Join Whatsapp