ಸಿದ್ದರಾಮಯ್ಯಗೆ ಅಭಿನಂದಿಸಿದ ಯಡಿಯೂರಪ್ಪ

Prasthutha|

ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಒಂದೇ ವೇದಿಕೆ ಹಂಚಿಕೊಂಡಿದ್ದು, ಈ ಸಂದರ್ಭ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂಧಿಸಿದ ಘಟನೆ ನಡೆದಿದೆ.

- Advertisement -

ಡಾ. ಶಿವಕುಮಾರ ಶಿವಮೂರ್ತಿಶಿವಯೋಗಿಗಳವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಕ್ತಕಂಠದಿಂದ ಅಭಿನಂದಿಸಿದ್ದಾರೆ.



Join Whatsapp