RSS ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ ಯಡಿಯೂರಪ್ಪ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು RSS ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

- Advertisement -

ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಪರಿಷತ್ ಸದಸ್ಯ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರ ಜೊತೆ RSS ಹಿರಿಯ ನಾಯಕ ಮುಕುಂದ್ ಅವರನ್ನು ಕೇಶವಕೃಪದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

RSS ನಾಯಕರ ಜೊತೆ ಯಡಿಯೂರಪ್ಪ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಪಕ್ಷ ಸಂಘಟನೆಯತ್ತ ಹೆಚ್ಚು ಗಮನ ನೀಡುತ್ತೇನೆ ಎಂದಿದ್ದ ಯಡಿಯೂರಪ್ಪರ ಈ ನಡೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

Join Whatsapp